ಬೆಂಗಳೂರು, ಮೇ 14 (DaijiworldNews/SM): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿವೆ. ಶುಕ್ರವಾರದಂದು ರಾಜ್ಯದಲ್ಲಿ 41779 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಶುಕ್ರವಾರದಂದು ರಾಜ್ಯದಲ್ಲಿ 373 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ 35879 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 598605 ಮಂದಿ ಕೋವಿಡ್ ಸೋಂಕಿಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಇಲ್ಲಿಯ ತನಕ ಒಟ್ಟು 2130267 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 1510557 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, 21085 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ ಶುಕ್ರವಾರ 14316 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 121 ಮಂದಿ ನಗರದಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.