ನವದೆಹಲಿ, ಮೇ.15 (DaijiworldNews/PY): ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಂದೇದಿನ ಸೋಂಕಿಗೆ 3,890 ಮಂದಿ ಸಾವನ್ನಪ್ಪಿದ್ದು, ಒಟ್ಟು 2,66,207 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸದ್ಯ ದೇಶದಲ್ಲಿ 36,73,802 ಸಕ್ರಿಯ ಪ್ರಕರಣಗಳಿವೆ. ಶನಿವಾರ ಒಂದೇ ದಿನ ಸುಮಾರು 3,53,299 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೊರೊನಾ ಲಸಿಕೆ ಆರಂಭವಾಗಿ ಇಲ್ಲಿಯವರೆಗೆ ಒಟ್ಟು 18,04,57,579 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.