ನವದೆಹಲಿ, ಮೇ.15 (DaijiworldNews/PY): ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಅಶಿಮ್ ಬ್ಯಾನರ್ಜಿ ಅವರು ಶನಿವಾರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅಶಿಮ್ ಬ್ಯಾನರ್ಜಿ ಅವರು, ಕೋಲ್ಕತ್ತಾದ ಮೇದಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಪಶ್ಚಿಮ ಬಂಗಾದಲ್ಲಿ ಶುಕ್ರವಾರ 20,846 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ. ಈ ನಡುವೆ 136 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 12,993 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.