ನವದೆಹಲಿ, ಮೇ.15 (DaijiworldNews/HR): ಭಾರತದಲ್ಲಿನ ಕೊರೊನಾ ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು ಎಂದು ತಿಳಿದು ಬಂದಿದೆ.
ಕೊರೊನಾ ಪರಿಸ್ಥಿತಿ ಬಗ್ಗೆ ಮೋದಿ ನಡೆಸಿದ ಸಭೆಯಲ್ಲಿ ಬೇರೆ ಬೇರೆ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.
ಇನ್ನು ಸಭೆಯಲ್ಲಿ ಸೋಂಕಿನ ಎರಡನೇ ಅಲೆ ತಡೆಗಟ್ಟುವ ಕ್ರಮಗಳ ಕುರಿತು ಪ್ರಧಾನಿ ಪರಿಸೀಲನೆ ನಡೆಸಿದ್ದಾರೆ.
ಇನ್ನು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶದ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 3.26 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 3,890 ಸಾವು ಸಂಭವಿಸಿದೆ.