ಚೆನ್ನೈ, ಮೇ.15 (DaijiworldNews/PY): ರೆಮ್ಡಿಸಿವರ್, ಆಕ್ಸಿಜನ್ ಸಿಲಿಂಡರ್ಗಳನ್ನು ಸಂಗ್ರಹಿಸಿ ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ದ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಶನಿವಾರ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಆದೇಶ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದು, ಕೊರೊನಾ ಸೋಂಕಿನಿಂದ ಜನರನ್ನು ಕಾಪಾಡುವುದು ಸರ್ಕಾರದ ಮೊದಲ ಜವಾಬ್ದಾರಿ. ರೆಮ್ಡಿಸಿವರ್, ಆಕ್ಸಿಜನ್ ಸಿಲಿಂಡರ್ಗಳನ್ನು ಸಂಗ್ರಹಿಸಿ ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ದ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.
"ಸರ್ಕಾರದ ಉದ್ದೇಶದ ವಿರುದ್ದವಾಗಿ ನಡೆದುಕೊಳ್ಳುವವರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಅಗತ್ಯ ಇದೆ. ದೇಶದಲ್ಲಿ ಬಿಕ್ಕಟ್ಟು ಸೃಷ್ಟಿ ಮಾಡಿರುವ ಕೊರೊನಾದ ಪ್ರಭಾವದಿಂದ ತಮಿಳುನಾಡು ಕೂಡಾ ಹೊರತಾಗಿಲ್ಲ" ಎಂದಿದ್ದಾರೆ.
"ಇಂತಹ ಪರಿಸ್ಥಿತಿಯ ಸಂದರ್ಭ ರೆಮ್ಡಿಸಿವರ್, ಆಕ್ಸಿಜನ್ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಳ್ಳುವವರ ವಿರುದ್ದ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದೇನೆ" ಎಂದು ಹೇಳಿದ್ದಾರೆ.