ನವದೆಹಲಿ, ಮೇ.16 (DaijiworldNews/PY): ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ ಗಂಟೆಯಲ್ಲಿ 3,11,170 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 2,46,84,077ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,077 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಒಟ್ಟು 2,70,284 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಸದ್ಯ 36,18,458 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಈ ನಡುವೆ 2,07,95,335 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ ಒಟ್ಟು 3,62,437 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಶನಿವಾರ 18,32,950 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಒಟ್ಟು 31,48,50,143 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ದೇಶದಲ್ಲಿ ಇಲ್ಲಿಯವರೆಗೆ 18,22,20,164 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.