ನವದೆಹಲಿ, ಮೇ.16 (DaijiworldNews/HR): ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಅವರು ರವಿವಾರ ನಿಧನರಾಗಿದ್ದಾರೆ.
ಏಪ್ರಿಲ್ 22ರಂದು ರಾಜೀವ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಪುಣೆಯ ಜೆಹಾಂಗೀರ್ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
ಇನ್ನು ಪ್ರಸ್ತುತ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದ ಅವರು, ಈ ಹಿಂದೆ ಮಹಾರಾಷ್ಟ್ರದ ಹಿಂಗೋಲಿಯಿಂದ 16ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು.
ಗುಜರಾತ್ ರಾಜ್ಯದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಶಾಶ್ವತವಾಗಿ ಆಯ್ಕೆಯಾಗಿದ್ದ ರಾಜೀವ್ ಅವರು ಗುಜರಾತ್ನ ಉಸ್ತುವಾರಿ ಆಗಿ ನೇಮಕಗೊಳ್ಳುವ ಮೊದಲು ಅವರು ಗುಜರಾತ್ ವಿಧಾನಸಭಾ ಚುನಾವಣೆ (2017) ಸಮಯದಲ್ಲಿ ಸೌರಾಷ್ಟ್ರ ಪ್ರದೇಶದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಯಾಗಿದ್ದರು.