ಬೆಂಗಳೂರು, ಮೇ.16 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಗುತ್ತಿದ್ದು, ಇದೀಗ ದೇಶದಲ್ಲಿ ಅತೀ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರವನ್ನು ಹಿಂದಿಕ್ಕಿ ಕರ್ನಾಟಕ ಮೊದಲ ಸ್ಥಾನಕ್ಕೇರಿದೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಸದ್ಯ 6,05,494 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 21,434 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಸದ್ಯ 4,94,032 ಸಕ್ರಿಯ ಪ್ರಕರಣಗಳಿದ್ದು, 80,512 ಜನ ಬಲಿಯಾಗಿದ್ದಾರೆ.
ಕರ್ನಾಟಕ ಸಕ್ರಿಯ ಪ್ರಕರಣಗಳಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿದ್ದು, ಕೊರೊನಾ ಸಾವಿನ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನ ಪಡೆದುಕೊಂಡಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳು ಇರುವ ರಾಜ್ಯಗಳೆಂದರೆ, ಕರ್ನಾಟಕ -6,05,494, ಮಹಾರಾಷ್ಟ್ರ-4,94,032, ಕೇರಳ- 4,45,334, ರಾಜಸ್ಥಾನ-2,08,688, ತಮಿಳುನಾಡು-2,07,789, ಆಂಧ್ರಪ್ರದೇಶ-2,07,467.