ನವದೆಹಲಿ, ಮೇ.16 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ, ರಾಜಸ್ಥಾನ, ಛತ್ತೀಸಗಡ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮುಖ್ಯಮಂತ್ರಿಗಳೊಂದಿಗೆ ರವಿವಾರ ಮಾತುಕತೆ ನಡೆಸಿ, ಆಯಾ ರಾಜ್ಯಗಳಲ್ಲಿನ ಕೊರೊನಾ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮಾತುಕತೆ ನಡೆಸುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಗಿದೆ.
ಇನ್ನು 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 3.11 ಲಕ್ಷ ಪ್ರಕರಣಗಳು ವರದಿಯಾಗಿದ್ದು, . 25 ದಿನಗಳ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದು ದಿನದಲ್ಲಿ ಅತಿ ಕಡಿಮೆ ಪ್ರಕರಣಗಳು ವರದಿಯಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.