ಬೆಂಗಳೂರು, ಮೇ 16 (DaijiworldNews/SM): ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ರವಿವಾರದಂದು 31,531 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ರವಿವಾರದಂದು 403 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 600147 ಮಂದಿ ಕೋವಿಡ್ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. 36475 ಮಂದಿ ರವಿವಾರದಂದು ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1581457ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 21837ಕ್ಕೆ ತಲುಪಿದೆ. ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 22,03,462ಕ್ಕೆ ಏರಿಕೆಯಾಗಿದೆ.