ನವದೆಹಲಿ, ಮೇ.17 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳಲ್ಲಿ ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,81,386 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 4,106 ಜನರು ಕೊರೊನಾಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,74,390ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿಪ್ರಕಾರ, ಭಾರತದಲ್ಲಿ ಒಟ್ಟು 35,16,997 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 2,11,74,076 ಸೋಂಕಿತರು ಗುಣಮುಖರಾಗಿದ್ದು, ಕಳೆದ 24 ಗಂಟೆಯಲ್ಲಿ 3,78,741 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ದೇಶದಲ್ಲಿ ಇದುವರೆಗೆ 18,22,20,164 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.