ಶ್ರೀನಗರ, ಮೇ.17 (DaijiworldNews/HR): ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಓರ್ವ ಉಗ್ರನನ್ನು ಸದೆಬಡಿದ ಘಟನೆ ಸೋಮವಾರ ಶ್ರೀನಗರದ ಹೊರವಲಯದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಶ್ರೀ ನಗರದ ಹೊರ ವಲಯದ ಖಾನ್ಮೊ ಪ್ರದೇಶದಲ್ಲಿಉಗ್ರರು ಅಡಗಿರುವ ಮಾಹಿತಿಯನ್ನಾಧರಿಸಿ ಇಂದು ಮುಂಜಾನೆ ರಾಷ್ಟ್ರೀಯ ರೈಫಲ್ಸ್, ಜಮ್ಮು-ಕಾಶ್ಮೀರ ಪೊಲೀಸ್ನ ವಿಶೇಷ ಕಾರ್ಯಾಚರಣೆ ತಂಡ ಹಾಗೂ ಸಿಆರ್ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಈ ಪ್ರದೇಶಕ್ಕೆ ಹೋಗುವ ಮತ್ತು ನಿರ್ಗಮಿಸುವ ಎಲ್ಲ ರಸ್ತೆಗಳನ್ನು ಮುಚ್ಚಿ, ಉಗ್ರರು ಅಡಗಿರುವ ಸ್ಥಳದತ್ತ ಭದ್ರತಾ ಪಡೆಗಳು ಸಾಗುತ್ತಿದ್ದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಇನ್ನು ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಸೋಮವಾರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.