ಬೆಂಗಳೂರು, ಮೇ 17 (DaijiworldNews/MS): ಕೋವಿಡ್ ಸಾಂಕ್ರಮಿಕ ರೋಗದ ಕಾರಣದಿಂದ ಮುಂದೂಡಲಾಗಿರುವ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದು, ಮುಂದೂಡಲಾಗಿರುವ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಪರೀಕ್ಷೆ ರದ್ದುಗೊಳಿಸುವ ಬಗ್ಗೆ , ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವ ಎಸ್.ಸುರೇಶ್ ಕುಮಾರ್, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.