ಬೆಂಗಳೂರು, ಮೇ 17 (DaijiworldNews/SM): ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿದ್ದು, ಲಾಕ್ ಡೌನ್ ಮುಂದುವರೆಯುತ್ತದೆ ಎನ್ನುವ ಚರ್ಚೆಗಳು ನಡೆಯುತ್ತಿದೆ. ಆದರೆ, ಇಲ್ಲಿಯ ತನಕ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಸ್ತುತ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಮೇ 24ರ ತನಕ ಇರಲಿದೆ. ಅದರ ಬಳಿಕವೂ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಸಚಿವರು ಒಲವು ಹೊಂದಿದ್ದಾರೆ. ಆದರೆ, ಇಲ್ಲಿಯ ತನಕ ಯಾವುದೇ ನಿರ್ಧಾರವಾಗಿಲ್ಲ. ಆದರೆ, ಪಾಸಿಟಿವ್ ಪ್ರಕರಣಗಳು ನಿಯಂತ್ರಣಕ್ಕೆ ಬಂದಿಲ್ಲ. ಆದರೆ, ಸದ್ಯ ಲಾಕ್ ಡೌನ್ ಬಗ್ಗೆ ನಿರ್ಧಾರವಾಗಿಲ್ಲ ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.