ಬೆಂಗಳೂರು, ಮೇ 17 (DaijiworldNews/SM): ಕೊರೋನಾ ಸೋಂಕಿನ ನಡುವೆಯೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಶುರುವಾಗಿದ್ದು, ಇದನ್ನು ನಿಭಾಯಿಸಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕಪ್ಪು ಶಿಲೀಂಧ್ರ ಸೋಂಕಿನ ಬಗ್ಗೆ ತಜ್ಞರೊಂದಿಗಿನ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಪ್ಪು ಶಿಲೀಂಧ್ರ ನಿಭಾಯಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ. ರವಿವಾರ ತನಕ ರಾಜ್ಯದಲ್ಲಿ 97 ಜನ ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿವೆ ಎಂದರು.
ಇನ್ನು ಕಪ್ಪು ಶಿಲೀಂಧ್ರದ ಬಗ್ಗೆ ಆತಂಕಗೊಳ್ಳುವ ಅಗತ್ಯವಿಲ್ಲ. ಬದಲಾಗಿದೆ ಎಚ್ಚರಿಕೆ ಅಗತ್ಯ. ಇದು ಕೊರೋನಾ ವೈರಸ್ ನಂತೆ ಬೇರೆಯವರಿಗೆ ಹರಡದ ಕಾರಣ ಭಯಪಡಬೇಡಿ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ರಾಜ್ಯದ ಜನತೆಗೆ ತಿಳಿಸಿದ್ದಾರೆ.