ಬೆಂಗಳೂರು, ಮೇ.18 (DaijiworldNews/PY): ಕೊರೊನಾ ಸೋಂಕಿನಿಂದ ಗುಣಮುಖರಾದ ಕೆಲವು ಮಂದಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು, ಅಂತವರಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
"ಕೊರೊನಾದಿಂದ ಚೇತರಿಸಿಕೊಂಡ ಕೆಲವು ಮಂದಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ರಾಜ್ಯದ ಆರು ಕಡೆಗಳಲ್ಲಿ ಚಿಕಿತ್ಸೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ" ಎಂದು ವೈದ್ಯಕೀಯ ಶಿಕ್ಷಣ ಸಚಿವ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ನೇತ್ರ ತಜ್ಞ ಭುಜಂಗ ಶೆಟ್ಟಿ, "ಬ್ಲ್ಯಾಕ್ ಫಂಗಸ್ಗೆ ಬೆಂಗಳೂರನ್ನು ಹೊರತುಪಡಿಸಿ ಶಿವಮೊಗ್ಗ, ಮೈಸೂರು, ಜಿಮ್ಸ್ ಕಿಮ್ಸ್, ವೆನ್ಲಾಕ್, ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಹಾಗೂ ಕೆಎಂಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ" ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಇಲ್ಲಿಯವರೆಗೆ 97 ಮಂದಿಗೆ ಬ್ಲ್ಯಾಕ್ ಫಂಗಸ್ ರೋಗ ಕಾಣಿಸಿಕೊಂಡಿದೆ. ಈ ಪೈಕಿ ನಾಲ್ಕು ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಮೂವರು ಬೆಂಗಳೂರಿನವರು, ಓರ್ವ ಕೋಲಾರದವರಾಗಿದ್ದಾರೆ.