ರಾಯಪುರ, ಮೇ.18 (DaijiworldNews/PY): "ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಹೆಡ್ಕಾನ್ಸ್ಟೇಬಲ್ ಮೃತಪಟ್ಟು, ಓರ್ವ ಪೊಲೀಸ್ ಗಾಯಗೊಂಡಿದ್ದಾರೆ" ಎಂದು ಪೊಲೀಸರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಮೃತರನ್ನು ಹೆಡ್ ಕಾನ್ಸ್ಟೇಬಲ್ ಕಲೆಂದ್ರ ಪ್ರಸಾದ್ ನಾಯಕ್ ಹಾಗೂ ಗಾಯಗೊಂಡವರನ್ನು ಕಾನ್ಸ್ಟೇಬಲ್ ಕಮಲ್ ಠಾಕೂರ್ ಎಂದು ಗುರುತಿಸಲಾಗಿದ್ದು, ಗಾಯಗೊಂಡ ಪೊಲೀಸ್ ಹಾಗೂ ಹೆಡ್ ಕಾನ್ಸ್ಟೆಬಲ್ನ ಮೃತದೇಹವನ್ನು ಬಿಜಾಪುರಕ್ಕೆ ಸ್ಥಳಾಂತರಿಸಲಾಗುತ್ತಿದೆ.
"ಮಂಗಳವಾರ ಬೆಳಗ್ಗೆ 9.30 ರ ಸುಮಾರಿಗೆ ಕುಟ್ರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡದಿದೆ. ಇಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾರ್ಯಗಳಿಗೆ ಭದ್ರತೆ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ಐಇಡಿ ಸ್ಪೋಟಿಸಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.
"ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ" ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.