ತುಮಕೂರು, ಮೇ.19 (DaijiworldNews/PY): ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ (72) ಕೊರೊನಾಗೆ ಬಲಿಯಾಗಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಕಾಗ್ಗೆರೆ ಮೂಲದ ಶಿವಕುಮಾರ್ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
2011ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂದ ಈತನ ವಿರುದ್ದ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2012ರಲ್ಲಿ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ದೂರು ದಾಖಲಾಗಿದ್ದು, ಈ ಪ್ರಕರಣದಲ್ಲೂ ಶಿವಕುಮಾರ್ ಹೆಸರು ಕೇಳಿ ಬಂದಿತ್ತು.
2013ರಲ್ಲಿ ದ್ವಿತೀಯ ಪಿಯುಸಿ ಜೀವಶಾಸ್ತ್ರ ಪ್ರಶ್ನೆ ಪತ್ರಿಕೆ ಮಾರಾಟಕ್ಕೆ ಸಂಬಂಧಪಟ್ಟ ಪ್ರಕರಣದಲ್ಲೂ ಶಿವಕುಮಾರ್ ಹೆಸರು ಕೇಳಿ ಬಂದಿತ್ತು.
ಎಸ್ಸೆಸ್ಸೆಲ್ಸಿ ಸೇರಿದಂತೆ ದ್ವಿತೀಯ ಪಿಯು, ಪೊಲೀಸ್ ಹಾಗೂ ವಿವಿದ ಪರೀಕ್ಷೆ ಪ್ರಶ್ನೆ ಸೋರಿಕೆಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದರು. ಈತನ ವಿರುದ್ದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.