ನವದೆಹಲಿ, ಮೇ 19 (DaijiworldNews/MS): ಭಾರತದಲ್ಲಿ ಕಳೆದ 24 ತಾಸುಗಳಲ್ಲಿ ಭಾರತದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿದ್ದು 4529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,83,248ಕ್ಕೆ ತಲುಪಿದೆ.
ಬಲಗೊಂಡಿರುವ ಕೊರೊನಾ ಎರಡನೇ ಅಲೆಯ ಈ ಸಂದರ್ಭದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 32,26,719ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 3,89,851 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,19,86,363ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 20,08,296 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 32,03,01,177 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,58,09,302 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.