ನವದೆಹಲಿ, ಮೇ.19 (DaijiworldNews/PY): "ದೇಶದಲ್ಲಿ ಕೊರೊನಾ ಲಸಿಕೆ ನೀಡುತ್ತಿರುವ ಸಂಖ್ಯೆ ಕಡಿಮೆಯಾಗುತ್ತಿವೆ ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಿವೆ. ಆದರೆ, ಕೇಂದ್ರ ಸರ್ಕಾರ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ದೇಶದಲ್ಲಿ ಕೊರೊನಾ ಲಸಿಕೆ ನೀಡುತ್ತಿರುವ ಸಂಖ್ಯೆ ಕಡಿಮೆಯಾಗುತ್ತಿವೆ ಹಾಗೂ ಸೋಂಕಿನಿಂದ ಸಾವಿನ ಸಂಖ್ಯೆ ಹೆಚ್ಚುತ್ತಿವೆ. ಆದರೆ, ಕೇಂದ್ರ ಸರ್ಕಾರ ಸುಳ್ಳುನ್ನು ಹರಡುವುದು, ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ, ಸತ್ಯವನ್ನು ಮರೆಮಾಚುವ ಮೂಲಕ ಗದ್ದಲವನ್ನು ಸೃಷ್ಟಿಸುವ ಯತ್ನ ಮಾಡುತ್ತಿದೆ. ಇದೇ ಕೇಂದ್ರ ಸರ್ಕಾರದ ನೀತಿ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಕಳೆದ 24 ತಾಸುಗಳಲ್ಲಿ ಭಾರತದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿದ್ದು 4,529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,83,248ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 32,26,719ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 3,89,851 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,19,86,363ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 20,08,296 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 32,03,01,177 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,58,09,302 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.