ಬೆಂಗಳೂರು, ಮೇ.19 (DaijiworldNews/HR): ಕರ್ನಾಟಕದಲ್ಲಿ ಸತತ ಎರಡನೆ ದಿನವೂ ಹೊಸ ಕೊರೊನಾ ಪ್ರಕರಣಗಳಿಗಿಂತ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದು, ಬುಧವಾರ 34, 281 ಕೊರೊನಾ ಸೋಂಕು ದೃಢಪಟ್ಟಿದ್ದು, 49953 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ 49, 953 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದೇ ಅವಧಿಯಲ್ಲಿ 34281 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 468 ಜನರು ಸೋಂಕಿನಿಂದ ಮೃತ ಪಟ್ಟಿದ್ದಾರೆ.
ಇನ್ನು ರಾಜ್ಯದಲ್ಲಿ ಇದುವರೆಗೆ ಒಟ್ಟು 23,06,655 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದುವರೆಗಿನ ಒಟ್ಟು 17,24,438 ಮಂದಿ ಆಸ್ಪತ್ರೆಯಿಂದು ಬಿಡುಗಡೆಯಾಗಿದ್ದಾರೆ.
ಕರ್ನಾಟಕದಲ್ಲಿ ಇದುವರೆಗೆ 1,14,28,711 ಜನರಿಗೆ ಲಸಿಕೆ ನೀಡಲಾಗಿದೆ.