ನವದೆಹಲಿ, ಮೇ.20 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 2,57,72,400 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 3,874 ಮಂದಿ ಸೋಂಕಿಗೆ ಸಾವನ್ನಪ್ಪಿದ್ದು, ಒಟ್ಟು 2,87,122 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಒಂದೇದಿನ 3,69,077 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು 2,23,55,440 ಮಂದಿ ಗುಣಮುಖರಾದ್ದಾರೆ, ದೇಶದಲ್ಲಿ ಸದ್ಯ 31,29,878 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟು 18,70,09,792 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.