ತಿರುವನಂತಪುರ, ಮೇ.20 (DaijiworldNews/PY): ಪಿಣರಾಯಿ ವಿಜಯನ್ ಅವರು ಸತತ ಎರಡನೇ ಬಾರಿಗೆ ಕೇರಳದ ಮುಖ್ಯಮಂತ್ರಿಯಾಗಿ ಗುರುವಾರ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಕೊರೊನಾ ಶಿಷ್ಟಾಚಾರಗಳೊಂದಿಗೆ ಸರಳ ಪ್ರಮಾಣವಚನ ಸಮಾರಂಭ ನಡೆಯಿತು. ರಾಜ್ಯಪಾಲ ಆರೀಪ್ ಮಹಮ್ಮದ್ ಖಾನ್ ಅವರು ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ 11 ಮಂದಿ ಸಂಪುಟ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದರು.
ಎಪ್ರಿಲ್-ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ಡಿಎಫ್ 140 ಸ್ಥಾನಗಳ ಪೈಕಿ 99 ಸ್ಥಾನಗಳನ್ನು ಗೆದ್ದಿದ್ದು, ಮತ್ತೆ ಅಧಿಕಾರದ ಗದ್ದುಗೆ ಏರಿತ್ತು.
ಕೊರೊನಾ ಸೋಂಕು ಇರುವ ಹಿನ್ನೆಲೆ ಸಮಾರಂಭದಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು ನಿರ್ಬಂಧಿಸುವಂತೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.