ಬೆಂಗಳೂರು, ಮೇ 20 (DaijiworldNews/SM): ರಾಜ್ಯದಲ್ಲಿ ಗುರುವಾರದಂದು ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 28,869 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ನಡುವೆ 548 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಗುರುವಾರದಂದು 52257 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1776695ಕ್ಕೆ ಏರಿಕೆಯಾಗಿದೆ. ಇಲ್ಲಿಯ ತನಕ ಒಟ್ಟು 2335524 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪ್ರಸ್ತುತ 534954 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 23854 ಮಂದಿ ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದೆ.
ಇನ್ನು ಬೆಂಗಳೂರು ನಗರದಲ್ಲೂ ಕೂಡ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿದ್ದು, ಗುರುವಾರದಂದು 9409 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 289 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.