ನವದೆಹಲಿ, ಮೇ 21(DaijiworldNews/MS): ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣದಲ್ಲಿ ಕೊಂಚ ಇಳಿಕೆ ಕಂಡುಬರುತ್ತಿದ್ದು, ಭಾರತದಲ್ಲಿ ಕಳೆದ 24 ತಾಸುಗಳಲ್ಲಿ 2,59,591 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 4,209 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 2,91,331 ತುತ್ತಾಗಿ ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,57,295 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ 2,27,12,735 ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 30,27,925 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.