ಬೆಳಗಾವಿ, ಮೇ.21 (DaijiworldNews/PY): ಕೇಂದ್ರದ ಮಾಜಿ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ (88) ಅವರು ಮೇ 21ರ ಶುಕ್ರವಾರ ಬೆಳಗ್ಗೆ ನಿಧನರಾದರು.
ಬಾಬಾಗೌಡ ಪಾಟೀಲ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಇವುರ 1998ರಲ್ಲಿ ಬೆಳಗಾವಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಾಬಾಗೌಡ ಪಾಟೀಲ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದರು.
1945 ಜನವರಿ 6ರಂದು ಜನಿಸಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇವರು 1989ರ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘದಿಂದ ಕಿತ್ತೂರು ಹಾಗೂ ಧಾರವಾಡ ಮತ ಕ್ಷೇತ್ರದಿಂದ ಕಣಕ್ಕಿಳಿದು ಎರಡು ಕಡೆಗಳಲ್ಲಿ ಜಯ ಸಾಧಿಸಿದ್ದರು.
ಬಾಬಾಗೌಡ ಪಾಟೀಲ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.