ಬೋಫಾಲ್ , ಮೇ 21(DaijiworldNews/MS): ಕೊವೀಡ್ ಎರಡನೇ ಅಲೆಯ ಸಮಯದಲ್ಲಿ ಕೋವಿಡ್ನಿಂದ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಪ್ರಕಟಿಸಿದೆ. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ.
ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾನ್ ಅವರು ಗುರುವಾರ ಬಿಜೆಪಿ ಶಾಸಕರೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಅಂತಹ ಕುಟುಂಬಗಳಿಗೆ ಒಂದು ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಹೇಳಿದರು.
ಎರಡನೇ ಅಲೆಯ ಸಮಯದಲ್ಲಿ ಕೊರೊನಾ ವೈರಸ್ ಗೆ ಬಲಿಯಾದ ಜನರ ಕುಟುಂಬಗಳಿಗೆ 1 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ಆರ್ಥಿಕವಾಗಿ ವಂಚಿತರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ರಾಜ್ಯ ಸರ್ಕಾರ ಈಗಾಗಲೇ ಉಚಿತ ಚಿಕಿತ್ಸೆ ನೀಡುತ್ತಿದೆ. ಕಪ್ಪು ಶಿಲೀಂಧ್ರದಿಂದ ಬಳಲುತ್ತಿರುವವರಿಗೆ ಉಚಿತ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕೋವಿಡ್ನಿಂದ ಸಾವನ್ನಪ್ಪಿದ ಸರ್ಕಾರಿ ನೌಕರರ ಕುಟುಂಬಗಳಿಗೆ 5 ಲಕ್ಷ ರೂ.ಗಳ ನೆರವು ನೀಡುವ ಯೋಜನೆಯನ್ನು ಸರ್ಕಾರ ಈ ಹಿಂದೆ ಪ್ರಾರಂಭಿಸಿತ್ತು. ಇದಲ್ಲದೆ ಅದರ ಮುಂದಿನ ಭಾಗವಾಗಿ ಅಂತಹ ನೌಕರರ ಕುಟುಂಬಕ್ಕೆ ಅನುಕಂಪದ ಆಧಾರವಾಗಿ ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದೆ.