ಬೆಂಗಳೂರು: ಮೇ 21(DaijiworldNews/MS): ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ ಹೀಗಾಗಿಯೇ ಮೊದಲು ಪ್ರಧಾನ ಮಂತ್ರಿಗಳು ತೆಗೆದುಕೊಳ್ಳದೇ, ಅದನ್ನು ಬಡವರ ಮೇಲೆ ಪ್ರಯೋಗಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೂ ಲಸಿಕೆಯನ್ನು ಎಂದೂ ವಿರೋಧಿಸಿಲ್ಲ. ಆದರೆ ಲಸಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ ಬಡ ಆಶಾ ಕಾರ್ಯಕರ್ತೆಯ ಮೇಲೆ ಪ್ರಯೋಗಿಸಿದ್ದು ಸೇರಿದಂತೆ ಕೋವಿಡ್ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ. ಆರಂಭದಲ್ಲಿ ಬಿಜೆಪಿಗೆಯೇ ಲಸಿಕೆ ಬಗ್ಗೆ ನಂಬಿಕೆ ಇರಲಿಲ್ಲ ಎಂದು ಹೇಳಿದ್ದಾರೆ.
ಲಸಿಕೆ ಬಗ್ಗೆ ವಿರೋಧ ಇದ್ದರೆ ಕಾಂಗ್ರೆಸ್ ನ ಹಿರಿಯ ನಾಯಕರಾದ ಸಿದ್ದರಾಮಯ್ಯನವರು , ನಾನು ಹಾಗೂ ಇತರ ಮುಖಂಡರು ಲಸಿಕೆ ಪಡೆದುಕೊಳ್ಳುತ್ತಿರಲಿಲ್ಲ. ಕೊರೊನಾ ಸಾಂಕ್ರಮಿಕ ಕಾಲಘಟ್ಟದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೊಟ್ಟ ಸಹಕಾರವನ್ನು ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ಮಾತನಾಡಿದ ವಿಪಕ್ಷ ನಾಯಕ ಕೊರನಾ ಎರಡನೇ ಅಲೆ ಬಹಳ ಕ್ಷೀಪ್ರವಾ ಹರಡುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲೂ ಕೊವೀಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಹೀಗೆ ಕೊವಿಡ್ ಹೆಚ್ಚಾಗಲು ಸರ್ಕಾರದ ಉದಾಸೀನತೆಯೇ ಕಾರಣ. ಹೆಸರಿಗೆ ಮಾತ್ರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದೊಂದು ಕೊಲೆಗೇಡಿ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.