ಬೆಂಗಳೂರು, ಮೇ 21 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್ ಸೋಂಕು ಭೀತಿ ಇದ್ದು, ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಲಾಕ್ ಡೌನ್ ಬಗ್ಗೆ ಘೋಷಣೆ ಮಾಡಿರುವ ಸಂದರ್ಭದಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಜನರು ಆತಂಕಕ್ಕೊಳಗಾಗಬಾರದು. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿದ್ದು ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.