ನವದೆಹಲಿ, ಮೇ.22 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,57,299 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 4,194 ಮಂದಿ ಸಾವನ್ನಪ್ಪಿದ್ದಾರೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,57,299 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,62,89,290 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 4,194 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2,95,525 ಕ್ಕೆ ಏರಿಕೆಯಾಗಿದೆ.
ಇನ್ನು 3,57,630 ಮಂದಿ ಸೋಂಕಿತರು ಕಳೆದ 24 ಗಂಟೆಯಲ್ಲಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು,ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಗುಣಮುಖರದವರ ಸಂಖ್ಯೆ 2,30,70,365 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸದ್ಯ 29,23,400 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.