ನವದೆಹಲಿ, ಮೇ.22 (DaijiworldNews/PY): "ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 20.66 ಲಕ್ಷಕ್ಕೂ ಅಧಿಕ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
"ದೇಶದಲ್ಲಿ ಸುಮಾರು 19.33 ಕೋಟಿ ಮಂದಿಗೆ ಲಸಿಕಾ ಅಭಿಯಾನದಡಿ ಲಸಿಕೆ ನೀಡಲಾಗಿದೆ. ಶನಿವಾರ ಬೆಳಗ್ಗೆ 7 ಗಂಟೆಯ ತನಕ ಒಟ್ಟು 19,33,72,819 ಡೋಸ್ ಲಸಿಕೆ ನೀಡಲಾಗಿದೆ. ಈ ಪೈಕಿ 97,38,148 ಮಂದಿ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಪಡೆದುಕೊಂಡಿದ್ದರೆ, ಎರಡನೇ ಡೋಸ್ ಅನ್ನು ಸುಮಾರು 66,91,350 ಮಂದಿ ಆರೋಗ್ಯ ಕಾರ್ಯಕರ್ತರು ಪಡೆದುಕೊಂಡಿದ್ದಾರೆ" ಎಂದು ತಿಳಿಸಿದೆ.
45-60 ವರ್ಷದೊಳಗಿನ 6,02,11,957 ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದರೆ, 96,84,295 ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. 5,56,83,760 ಮಂದಿ 60 ವರ್ಷ ಮೇಲ್ಪಟ್ಟವರು ಮೊದಲ ಲಸಿಕೆ ಪಡೆದುಕೊಂಡಿದ್ದರೆ, 1,81,89,676 ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.
18ರಿಂದ 44 ವರ್ಷದೊಳಗಿನ 92,97,532 ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದಾರೆ. 1,14,70,081 ಜನ ಮುಂಚೂಣಿ ಕಾರ್ಯಕರ್ತರು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದರೆ, 83,06,020 ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,57,299 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,62,89,290 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 4,194 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2,95,525 ಕ್ಕೆ ಏರಿಕೆಯಾಗಿದೆ.
"ಇನ್ನು 3,57,630 ಮಂದಿ ಸೋಂಕಿತರು ಕಳೆದ 24 ಗಂಟೆಯಲ್ಲಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು,ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಗುಣಮುಖರದವರ ಸಂಖ್ಯೆ 2,30,70,365 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 29,23,400 ಸಕ್ರಿಯ ಪ್ರಕರಣಗಳಿವೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.