ನವದೆಹಲಿ, ಮೇ 22 (DaijiworldNews/SM): ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಗ್ರಹ ಸಲ್ಲಿಸಿದೆ.
ಬಾಬಾ ರಾಮ್ ದೇವ್ ಅವರು ಅಲೋಪತಿ ವೈದ್ಯ ಪದ್ಧತಿಯ ಬಗ್ಗೆ ತಿಳಿವಳಿಕೆ ಇಲ್ಲದೇ ಹೇಳಿಕೆ ನೀಡುತ್ತಿದ್ದಾರೆ ಎನ್ನುವುದು ಸದ್ಯ ಅವರ ವಿರುದ್ಧ ಇರುವ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ಬಾಬಾ ರಾಮ್ ದೇವ್ ವಿರುದ್ಧ ಎಪಿಡೆಮಿಕ್ ಡಿಸೀಸಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಐಎಂಎ ಆಗ್ರಹಿಸಿದೆ.
ಅಲೋಪತಿ ಬಗ್ಗೆ ತಿಳಿವಳಿಕೆ ಇಲ್ಲದೇ ರಾಮ್ ದೇವ್ ಅವರು ಹೇಳಿಕೆ ನೀಡುತ್ತಿದ್ದು, ಇದರಿಂದಾಗಿ ಜನರು ದಾರಿ ತಪ್ಪುವ ಸಾಧ್ಯತೆ ಹೆಚ್ಚಾಗಿದೆ ಎಂಬುವ ಉಲ್ಲೇಖವನ್ನು ಕೂಡ ಐಎಂಎ ಮಾಡಿದೆ.
ಇನ್ನು ಬಾಬಾ ರಾಮ್ ದೇವ್ ಅವರು ನೀಡಿರುವ ಹೇಳಿಕೆಯ ವೀಡಿಯೋ ವೈರಲ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಗಳು ಹೆಚ್ಚಾಗಿವೆ.