ಬೆಂಗಳೂರು, ಮೇ 22 (DaijiworldNews/SM): ಶನಿವಾರದಂದು ರಾಜ್ಯದಲ್ಲಿ 31183 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ 451 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಶನಿವಾರದಂದು 61766 ಮಂದಿ ಗುಣಮುಖರಾಗಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 1891042ಕ್ಕೆ ಏರಿಕೆಯಾಗಿದೆ. ಈ ನಡುವೆ ಇಲ್ಲಿಯ ತನಕ ಒಟ್ಟು 24658 ಮಂದಿ ರಾಜ್ಯದಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ 483204 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ರಾಜ್ಯದಲ್ಲಿ ಒಟ್ಟು 2398925 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇನ್ನು ಶನಿವಾರದಂದು ಅತ್ಯಧಿಕ ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿದ್ದು, 8214 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಬೀದರ್ ಜಿಲ್ಲೆಯಲ್ಲಿ ಕನಿಷ್ಟ ಪ್ರಕರಣಗಳು ಪತ್ತೆಯಾಗಿದ್ದು, 58 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.