ನವದೆಹಲಿ, ಮೇ.23 (DaijiworldNews/PY): ಯಾಸ್ ಚಂಡಮಾರುತವು ಮೇ 26ರಂದು ಒಡಿಶಾ ಹಾಗೂ ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದುಹೋಗಲಿದ್ದು, ಈ ಬಗ್ಗೆ ಆ ರಾಜ್ಯಗಳಲ್ಲಿ ಕೈಗೊಂಡಿರುವ ಪೂರ್ವ ಸಿದ್ದತೆಯ ಕುರಿತು ಹಿರಿಯ ಅಧಿಕಾರಿಗಳ ಜೊತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಲಿದ್ದಾರೆ.
ಭೂ ವಿಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳು ಸೇರಿದಂತೆ ವಿದ್ಯುತ್, ನಾಗರಿಕ ವಿಮಾನಯಾನ, ದೂರ ಸಂಪರ್ಕಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಸಚಿವರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
"ಯಾಸ್ ಚಂಡಮಾರುತ ಭಾರೀ ಬಿರುಗಾಳಿ ಸ್ವರೂಪ ಪಡೆದು, ಮೇ 26ರಂದು ಒಡಿಶಾ ಹಾಗೂ ಪಶ್ಚಿಮಬಂಗಾಳ ಕರಾವಳಿಯನ್ನು ಹಾದುಹೋಗಲಿದೆ" ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ಹೇಳಿದೆ.