ನವದೆಹಲಿ, ಮೇ.23 (DaijiworldNews/PY): ಒಂದು ದಿನದ ಸ್ಥಿರತೆಯ ಬಳಿಕ ಇಂದು ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಇಂಧನ ಬೆಲೆಯಲ್ಲಿ ಹೆಚ್ಚಳ ಮಾಡಿವೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಾರ, ಇಂದು ಪೆಟ್ರೋಲ್ ಬೆಲೆಯಲ್ಲಿ 15-17 ಪೈಸೆ, ಡೀಸೆಲ್ ಬೆಲೆಯಲ್ಲಿ 25-29 ಪೈಸೆಯಷ್ಟು ಹೆಚ್ಚಳವಾಗಿದೆ.
ದರ ಏರಿಕೆ ಬಳಿಕ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 93.21 ರೂ., ಡೀಸೆಲ್ ಬೆಲೆ 84.07 ರೂ. ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 99.49 ರೂ. ಆಗಿದ್ದು, ಡೀಸೆಲ್ ದರ 91.30 ರೂಪಾಯಿಗೆ ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 96.31 ರೂ. ಗೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆ 89.12 ರೂ. ಆಗಿದೆ. ಹೈದರಾಬಾದ್ನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 96.88 ರೂ. ಗೆ ಏರಿಕೆಯಾಗಿದ್ದು, ಒಂದು ಲೀಟರ್ ಡೀಸೆಲ್ ದರ 91.65 ರೂ. ಗೆ ಹೆಚ್ಚಳವಾಗಿದೆ.
ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.86 ರೂ. ಆಗಿದ್ದು, ಡೀಸೆಲ್ ಬೆಲೆ 88.87 ರೂ. ಆಗಿದೆ. ಕೋಲ್ಕತ್ತಾದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 93.27 ರೂ. ಆಗಿದ್ದು, ಒಂದು ಲೀಟರ್ ಡೀಸೆಲ್ ಬೆಲೆ 86.91 ರೂ.ಗೆ ಹೆಚ್ಚಳವಾಗಿದೆ.