ಬೆಂಗಳೂರು, ಮೇ.23 (DaijiworldNews/PY): ರೆಮ್ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ಹಾಗೂ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನೂತನ ವ್ಯವಸ್ಥೆ ಮಾಡಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು, "ರೆಮ್ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು ಎಸ್ಎಂಎಸ್ ಕಳುಹಿಸಲಾಗುತ್ತದೆ. ಸಾರ್ವಜನಿಕರು ಈ ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು. https://covidwar.karnataka.gov.in/service2" ಎಂದು ಉಲ್ಲೇಖಿಸಿದ್ದಾರೆ.
"ಒಂದು ವೇಳೆ ಸೋಂಕಿತ ವ್ಯಕ್ತಿಯ ಎಸ್ಆರ್ಎಫ್ ಐಡಿಗೆ ರೆಮ್ಡೆಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ" ಎಂದಿದ್ದಾರೆ.