ಗದಗ, ಮೇ.23 (DaijiworldNews/HR): ಕೊರೊನಾ ಸೋಂಕು ದೃಢಪಟ್ಟು ಹೋಂ ಐಸೋಲೇಷನ್ ನಲ್ಲಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಗದಗದ ಕದಡಿ ಗ್ರಾಮದಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ನೇಣಿಗೆ ಶರಣಾದವರನ್ನು ಲಲಿತಾ ಶಂಕರಪ್ಪ ರೋಣದ (45) ಎಂದು ಗುರುತಿಸಲಾಗಿದೆ.
ಲಲಿತಾ ಅವರಿಗೆ ಕಳೆದ ವಾರ ಕೊರೊನಾ ಸೋಂಕು ದೃಢಪಟ್ಟಿದ್ದು, ಹೀಗಾಗಿ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಇನ್ನು ರವಿವಾರ ಬೆಳಗಿನ ಜಾವ ಗ್ರಾಮದ ಹೊರವಲಯದ ಮರಕ್ಕೆ ನೇಣು ಬಿಗಿದುಕೊಂಡು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.