ನವದೆಹಲಿ, ಮೇ.23 (DaijiworldNews/HR): ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಮೇ. 31ರ ವರೆಗೆ ಮತ್ತೆ ಲಾಕ್ಡೌನ್ ವಿಸ್ತರಿದ್ದು, ಸತತ ಐದನೇ ಬಾರಿಗೆ ಲಾಕ್ಡೌನ್ ವಿಸ್ತರಿಸಲಾಗಿದೆ.
ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1,600 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಪ್ರಕರಣಗಳು ಕಡಿಮೆಯಾದರೆ ಸರ್ಕಾರವು ಮೇ 31 ರಿಂದ ಹಂತ ಹಂತವಾಗಿ ದೆಹಲಿಯನ್ನು ಅನ್ ಲಾಕ್ ಮಾಡಲು ಪ್ರಾರಂಭಿಸುತ್ತದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಇನ್ನು ದೆಹಲಿ ಸರ್ಕಾರ ಆದಷ್ಟು ಬೇಗ ಎಲ್ಲರಿಗೂ ಲಸಿಕೆ ಹಾಕಲು ಯೋಜಿಸುತ್ತಿದ್ದು, ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ. ನಾವು ಸಾಧ್ಯವಾದಷ್ಟು ಬೇಗ ಎಲ್ಲರಿಗೂ ಲಸಿಕೆ ಹಾಕಲು ಯೋಜಿಸುತ್ತಿದ್ದೇವೆ. ಲಸಿಕೆಗಳಿಗೆ ಸಂಬಂಧಿಸಿದಂತೆ ನಾನು ದೇಶೀಯ ಮತ್ತು ವಿದೇಶಿ ಕಂಪನಿಗಳೊಂದಿಗೆ ಮಾತುಕತೆ ಮಾಡುತ್ತಿದ್ದೇನೆ" ಎಂದು ಹೇಳಿದ್ದಾರೆ.