ಬೆಂಗಳೂರು, ಮೇ.23 (DaijiworldNews/PY): ಮಾಜಿ ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಎಂ. ರಾಜಗೋಪಾಲ್ ಅವರು ವಯೋಸಹಜ ಕಾಯಿಲೆಯಿಂದ ರವಿವಾರ ನಿಧನರಾಗಿದ್ದಾರೆ.
ಎಂ. ರಾಜಗೋಪಾಲ್ ಅವರು ಕನಕಪುರ ಮೂಲದವರಾಗಿದ್ದು, ಪ್ರಸ್ತುತ ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿ ವಾಸವಿದ್ದರು. ಇವರು ಕಾಂಗ್ರೆಸ್ನ ಹಿರಿಯ ನಾಯಕರಾದ ಜಾಫ ಶರೀಫ್ ಸೇರಿದಂತೆ ಡಿ.ಕೆ.ಸುರೇಶ್, ಡಿ.ಕೆ ಶಿವಕುಮಾರ್, ದಿನೇಶ್ ಗುಂಡೂರಾವ್ ಅವರೊಂದಿಗೆ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, "ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ರಾಜ್ಯಸಭಾ ಸದಸ್ಯ, ಸಜ್ಜನ ಹಾಗೂ ನಿಷ್ಕಲ್ಮಶ ಮನಸ್ಸಿನ ರಾಜಕಾರಣಿ ಎಂ. ರಾಜಗೋಪಾಲ್ ಅವರ ನಿಧನ ನೋವಿನ ಸಂಗತಿ. ಅವರ ಆತ್ಮಕ್ಕೆ ಶಾತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಸಂತಾಪ ಸೂಚಿಸಿದ್ದಾರೆ.