ಬೆಂಗಳೂರು, ಮೇ.23 (DaijiworldNews/PY): "ಕೊರೊನಾ ಸಾವಿನ ಲೆಕ್ಕ ಸರ್ಕಾರ ಮುಚ್ಚಿಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪ ಸುಳ್ಳು" ಎಂದು ಡಿಸಿಎಂ ಸಿ.ಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ..
ಚಿತ್ರರಂಗದ ಪೋಷಕ ಕಲಾವಿದರಿಗೆ ಭರತ್ಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಫುಡ್ ಕಿಟ್ ವಿತರಿಸಿದ ನಂತರ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪ ಸುಳ್ಳು. ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಬಗ್ಗೆ ಮಾಹಿತಿ ಇದೆ. ಯಾರಾದರೂ ಮೃತರಾದಲ್ಲಿ ಅವರ ಮಾಹಿತಿಯನ್ನೂ ವಿವಿಧ ಹಂತಗಳಲ್ಲಿ ದಾಖಲಾಗುತ್ತಿದೆ" ಎಂದಿದ್ದಾರೆ.
"ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದುದು. ಈ ಬಗ್ಗೆ ಜನರಲ್ಲಿ ಗೊಂದವುಂಟು ಮಾಡುವುದು ಬೇಡ" ಎಂದು ಹೇಳಿದ್ದಾರೆ.
ಲಸಿಕೆ ಕೊರತೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ರಾಜ್ಯದಲ್ಲಿ ಮಾತ್ರವಲ್ಲದೇ ದೇಶದಲ್ಲೂ ಲಸಿಕೆ ಕೊರತೆ ಇದೆ. ಸರ್ಕಾರ ಉತ್ಪಾದಕರಿಂದ ಲಸಿಕೆ ಪಡೆದುಕೊಂಡು ಜನರಿಗೆ ನೀಡುವ ಎಲ್ಲಾ ಯತ್ನಗಳನ್ನು ಮಾಡುತ್ತಿದೆ. ಲಸಿಕೆಯನ್ನು ಆದ್ಯತೆಯ ಮೇರೆಗೆ ಯಾರಿಗೆ ನೀಡಬೇಕೋ ಅವರಿಗೆ ನೀಡಲಾಗುತ್ತದೆ" ಎಂದು ತಿಳಿಸಿದ್ದಾರೆ.