ಚಾಮರಾಜನಗರ, ಮೇ 23 (DaijiworldNews/SM): ರಾಜ್ಯಕ್ಕೆ ಸಂಬಂಧಿಸಿದಂತೆ ಹೊಸ ಮರಳು ನೀತಿ ಜಾರಿಗೆ ತರಲು ಸರಕಾರ ನಿರ್ಧರಿಸಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, "ಹೊಸ ಮರಳು ಹಾಗೂ ಗಣಿ ನೀತಿ ಜಾರಿಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಹಾಗೂ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟವರಿಗೆ ಕಳುಹಿಸಲಾಗಿದೆ. ಜಿಲ್ಲಾಡಳಿತಗಳಿಂದ ಸಿಗುವ ಪ್ರತಿಕ್ರಿಯೆಗಳ ಅನುಗುಣವಾಗಿ ಮರಳು ಹಾಗೂ ಗಣಿ ನೀತಿ ಸಿದ್ಧಪಡಿಸಲಾಗುವುದು. ಒಂದೆರಡು ವಾರಗಳಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.