ನವದೆಹಲಿ, ಮೇ.24 (DaijiworldNews/HR): ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,22,315 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 2,22,315 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,67,52,447 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕಿನಿಂದ 4,454 ಮಂದಿ ಮೃತಪಟ್ಟಿದ್ದು, ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3,03,720 ಕ್ಕೆ ಏರಿಕೆಯಾಗಿದೆ.
3,02,544 ಸೋಂಕಿತರು ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಈವರಗೆ ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 2,37,28,011 ಕ್ಕೆ ಏರಿಕೆಯಾಗಿದೆ.