ಬೆಂಗಳೂರು, ಮೇ.24 (DaijiworldNews/HR): ಕರ್ನಾಟಕದಲ್ಲಿ ಇಂದಿನಿಂದ ಜೂನ್ 7ರವರೆಗೆ ಲಾಕ್ಡೌನ್ ಮುಂದುವರೆದಿದ್ದು, ಟಫ್ ರೂಲ್ಸ್ ಜಾರಿಯಾಗಿದೆ. ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ಲಾಕ್ಡೌನ್ ಜಾರಿಯಾಗಿದ್ದು, ಆಯಾ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲಾಗಿದೆ. ಈಗಾಗಲೇ 3-4 ದಿನಗಳ ಲಾಕ್ ಡೌನ್ ಇರುವ ಜಿಲ್ಲೆಗಳಲ್ಲಿ ನಿಯಮಗಳನ್ನು ಸೂಕ್ತವಾಗಿ ಪಾಲಿಸಲಾಗುತ್ತಿದೆ. ಉಳಿದ ಜಿಲ್ಲೆಗಳಲ್ಲೂ ಅನಗತ್ಯವಾಗಿ ವಾಹನಗಳಲ್ಲಿ ಸಂಚರಿಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ" ಎಮ್ದರು.
ಇನ್ನು "ಅನಗತ್ಯವಾಗು ಓಡಾಟ ನಡೆಸುವ ವಾಹನಗಳನ್ನು ಸೀಜ್ ಮಾಡಿ, ವಶಕ್ಕೆ ಪಡೆಯಲಾಗುತ್ತಿದ್ದು, ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ, ಹಲವು ರಸ್ತೆಗಳಲ್ಲಿ ಒನ್ ವೇ ನಿಯಮ ಜಾರಿಗೆ ಹೇಳಲಾಗಿದೆ" ಎಂದಿದ್ದಾರೆ.
ಗೃಹ ಸಚಿವರ ಸೂಚನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಪೊಲೀಸರು ಅನಗತ್ಯವಾಗಿ ತಿರುಗಾಡುವವರನ್ನು ವಶಕ್ಕೆ ಪಡೆಯುತ್ತಿದ್ದು, ಬೆಳಿಗ್ಗೆಯಿಂದ ಸುಮಾರು 700 ವಾಹನಗಳನ್ನು ಸೀಜ್ ಮಾಡಲಾಗಿದ್ದು, 200ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.