ಬೆಂಗಳೂರು, ಮೇ 24 (DaijiworldNews/SM): ರಾಜ್ಯದಲ್ಲಿ ಸೋಮವಾರದಂದು 25311 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ನಡುವೆ 529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 57333 ಮಂದಿ ಸೋಮವಾರದಂದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 440435 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ 2450215 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 1983948 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 25811 ಮಂದಿ ಇಲ್ಲಿಯ ತನಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.