ನವದೆಹಲಿ, ಮೇ25 (DaijiworldNews/MS): ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ಇಳಿಕೆಯತ್ತ ಸಾಗುತ್ತಿದೆ. ಮೇ ೨೫ರ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,96,427 ಜನರಲ್ಲಿ ಸೋಂಕು ದೃಢಪಟ್ಟಿದ್ದು, 3,511 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಹಲವು ವಾರಗಳಿಂದ ಸರಿಸುಮಾರು 4 ಲಕ್ಷದ ಅಂದಾಜಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ 2 ಲಕ್ಷಕ್ಕಿಂತ ಕಡಿಮೆಯಾಗಿರುವುದು ಎರಡನೇ ಅಲೆಯ ಇಳಿಕೆಯಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ.
ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 2,78,719ಕ್ಕೆ ತಲುಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ. ದಿನನಿತ್ಯದ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,86,782ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,26,850 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,40,54,861ಕ್ಕೆ ತಲುಪಿದೆ. ಸಂಖ್ಯೆ 2,78,719ಕ್ಕೆ ತಲುಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ.