ಮಡಿಕೇರಿ, ಮೇ.25 (DaijiworldNews/HR): ದೇಶದ್ಯಾಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯದ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಕರ್ನಾಟಕ-ಕೇರಳ ರಾಜ್ಯಗಳ ನಡುವೆ ಸಂಚರಿಸುವ ವಾಹನ ಮತ್ತು ಅದರಲ್ಲಿ ಬರುವ ಪ್ರಯಾಣಿಕರು ಹಾಗೂ ಕಾಲು ನಡಿಗೆಯಲ್ಲಿ ಸಂಚರಿಸುವವರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಪಡೆದಿರುವ ಕೊರೊನಾ ನೆಗೆಟಿವ್ ವರದಿ ಹೊಂದಿರಬೇಕು.
ಸಾಂಧರ್ಭಿಕ ಚಿತ್ರ
ಕುಟ್ಟ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಕುಟ್ಟ ಪೊಲೀಸ್ ಠಾಣಾ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು ಈ ವೇಳೆ ಸಂಜೆ ಕೇರಳ ರಾಜ್ಯ ಕಡೆಯಿಂದ ಬಂದ ಒಂದು ಗೂಡ್ಸ್ ವಾಹನ ಪರಿಶೀಲಿಸಿದ್ದು ಲಾರಿಯಲ್ಲಿದ್ದ ಚಾಲಕ ಸಿದ್ದಾಪುರ ಬಳಿಯ ನೆಲ್ಲಿಹುದಿಕೇರಿಯ ಜಂಶೀರ್ ಎಂಬಾತನು ತೋರಿಸಿದ ಕರ್ನಾಟಕ ಸರಕಾರದ ಕೊರೊನಾ ಆರ್ ಟಿಪಿಸಿಆರ್ ನೆಗೆಟಿವ್ ವರದಿಯನ್ನು ಅದರ ಸಂಖ್ಯೆಯನ್ನು ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮೂಲಕ ಪರಿಶೀಲಿಸಿದಾಗ ಆ ವರದಿ ನಕಲಿ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಚಾಲಕ ಜಂಶೀರ್ ನನ್ನು ಈ ಬಗ್ಗೆ ವಿಚಾರಣೆಗೊಳಪಡಿಸಿದ್ದಾರೆ.
ಇನ್ನು ವಿಚಾರಣೆ ವೇಳೆ ಆರ್ ಟಿಪಿಸಿಆರ್ ವವರದಿಯನ್ನು ಸಿದ್ದಾಪುರದ ಪತ್ರಿಕೆ ವರದಿಗಾರನೊಬ್ಬ ಕೇರಳಕ್ಕೆ ಪ್ರಯಾಣಿಸುವವರಿಗೆ ಆತನ ಸ್ಟುಡಿಯೋದಲ್ಲಿಯೇ ಆರ್ಟಿಪಿಸಿಆರ್ ವರದಿಯನ್ನು ತಯಾರಿಸಿ ನೀಡುತ್ತಿರುವುದಾಗಿ ತಿಳಿಸಿದ್ದಾನೆ.
ಕೂಡಲೇ ಕಾರ್ಯಪ್ರವೃತ್ತರಾದ ಮಡಿಕೇರಿ ನಗರ ವೃತ್ತ ನಿರೀಕ್ಷಕರಾದ ಅನೂಪ ಮಾದಪ್ಪ ಹಾಗು ಸಿಬ್ಬಂದಿಯವರು ಸಿದ್ದಾಪುರದ ಪತ್ರಕರ್ತ ಜಂಶೀರ್ ನನ್ನು ಬಂಧಿಸಿದ್ದಾರೆ.