ಜೈಪುರ, ಮೇ.25 (DaijiworldNews/HR): ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆಗೆ ಆದೇಶಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಮೂವರು ಆರೋಪಿಗಳು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಯುವತಿಯನ್ನು ಬಾವಿಗೆ ಎಸೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುತ್ತಿದ್ದು ಈ ಸಂಬಂಧ ಸಂತ್ರಸ್ತೆಯ ತಂದೆಯ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ ಇದಾದ ಬಳಿಕ ತನ್ನ ಹೇಳಿಕೆ ಬದಲಿಸಿರುವ ಬಾಲಕಿಯ ತಂದೆ ಯಾರನ್ನೂ ಆರೋಪಿಗಳು ಎಂದು ಹೆಸರಿಸಿಲ್ಲ. ಇದು ಅತ್ಯಾಚಾರ ಪ್ರಕರಣವಲ್ಲ. ಸಹೋದರಿಯೊಂದಿಗೆ ಜಗಳವಾಡಿದ ಬಳಿಕ ಬಾವಿಗೆ ಹೋಗಿ ಬಿದ್ದಿದ್ದಾಳೆ ಎಂದು ಹೇಳಿಕೆ ನೀಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.