ಬೆಂಗಳೂರು, ಮೇ 25 (DaijiworldNews/SM): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಮಂಗಳವಾರದಂದು 22758 ಮಂದಿಯಲ್ಲಿ ರಾಜ್ಯದಲ್ಲಿ ಸೋಂಕು ಪತ್ತೆಯಾಗಿದೆ.
ಇನ್ನು ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮಂಗಳವಾರದಂದು ಮತ್ತೆ 588 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಂದು 38224 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 424381 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಇಲ್ಲಿಯ ತನಕ ಒಟ್ಟು 2472973 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 2022172 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 26399 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಇನ್ನು ಮಂಗಳವಾರದಂದು ಬೆಂಗಳೂರು ನಗರದಲ್ಲಿ ಅತ್ಯಧಿಕ ಪ್ರಕರಣಗಳು ಪತ್ತೆಯಾಗಿದ್ದು, 6243 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 350 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇನ್ನು ಅತೀ ಕಡಿಮೆ ಪ್ರಕರಣಗಳು ಬೀದರ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, 48 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.