ಬೆಂಗಳೂರು, ಮೇ 26 (DaijiworldNews/SM): ರಾಜ್ಯದಲ್ಲಿ ಬುಧವಾರದಂದು ಸೋಂಕಿತರ ಸಂಖ್ಯೆ ಅಲ್ಪ ಏರಿಕೆಯಾಗಿದೆ. 26811 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಬುಧವಾರದಂದು ಮತ್ತೆ 530 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 40741 ಮಂದಿ ಬುಧವಾರದಂದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 409924 ಸಕ್ರೀಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಲ್ಲಿಯ ತನಕ ಒಟ್ಟು 2499784 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 2062910 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 26929 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಬುಧವಾರದಂದು 6433 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 285 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.