ನವದೆಹಲಿ, ಮೇ.27 (DaijiworldNews/PY): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,11,298 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 3,847 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 3,15,235 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ 2,46,33,951 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 2,83,135 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 24,19,907 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಇಲ್ಲಿಯವರೆಗೆ 20,26,95,874 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ.